ಎ.ಕೆ. ರಾಮಾನುಜನ್ ಅವರ ಆಯ್ದ ಕವಿತೆಗಳು

SKU: 107
Category: , ,

75.00

75 In Stock
Weight 147.00000000 g
Number of pages

108

Year of Publication

2006

Author

ಎ.ಕೆ. ರಾಮಾನುಜನ್

eBook

https://play.google.com/store/books/details/A_K_Ramanujan_A_K_Ramanujan_Avara_Aayda_Kavithegal?id=dWYKEAAAQBAJ

75 in stock

Description

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು — ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ — ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ — ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

Reviews

There are no reviews yet.

Be the first to review “ಎ.ಕೆ. ರಾಮಾನುಜನ್ ಅವರ ಆಯ್ದ ಕವಿತೆಗಳು”

Your email address will not be published. Required fields are marked *

No Author Found