ಸಲ್ಮಾ ಮತ್ತು ಸುರಭಿ

SKU: 206
Category: , , , ,

125.00

42 in stock

Weight 0.00000000 g
Number of pages

124

Year of Publication

2020

Author

ವೈದೇಹಿ

eBook

https://play.google.com/store/books/details/Vaidehi_Salma_Mattu_Surabhi?id=5K8DEAAAQBAJ

Description

ವೈದೇಹಿ ಕತೆಗಳನ್ನು ಓದುವುದೆಂದರೆ ಅತ್ಯಂತ ಸೂಕ್ಷ್ಮವಾದ ಶ್ರಾವಣ ಪ್ರತಿಭೆಯೊಂದರ ಮೂಲಕ ಜಗತ್ತನ್ನು ಗ್ರಹಿಸುವ ಕೆಲಸ… ವೈದೇಹಿಯವರ ಕತೆಗಳ ಪಾತ್ರಗಳ ಹುಟ್ಟು, ಅಸ್ತಿತ್ವಗಳು ಅವುಗಳಿಗೆ ವಿಶಿಷ್ಟವಾದ, ಅವುಗಳ ಸಂವೇದನೆಯ ಅವಿಭಾಜ್ಯ ಅಂಶವಾಗಿ, ಕರ್ಣನಿಗೆ ಕವಚ ಕುಂಡಲಗಳಿದ್ದಂತೆ ಇರುವ, ಅವುಗಳ ಮಾತಿನಲ್ಲಿವೆ. ನಮ್ಮ ಓದಿನಲ್ಲಿ ಈ ಪಾತ್ರಗಳು ಪ್ರತ್ಯಕ್ಷವಾಗುವುದು, ನಮ್ಮ ಅನುಭವಲೋಕವನ್ನು ಪ್ರವೇಶಮಾಡಿ ನಿಲ್ಲುವುದು ಅವುಗಳ ಮಾತಿನಿಂದಲೇ. ಇದು ಕೇವಲ ಕತೆಗಾತಿಯ ಜಾಣ್ಮೆ ಅಥವಾ ಕೌಶಲ್ಯದ ವಿಷಯವಲ್ಲ. ಅಥವಾ ಅವರು ಬಳಸುವ ಪ್ರಾದೇಶಿಕ ಭಾಷೆಯ ಸೊಗಡಿನ ವಿಷಯವಲ್ಲ. ಮನುಷ್ಯರ ಅಂತರಂಗದ ಅತ್ಯಂತ ಅನಿರೀಕ್ಷಿತವಾದ, ಗೋಚರಕ್ಕೂ ಬರದಷ್ಟು ಸೂಕ್ಷ್ಮವಾದ, ಸಂಗ್ರಹಿಸಿ ಹೇಳಹೊರಟರೆ ತಮ್ಮ ನೈಜ ಸಂಕೀರ್ಣತೆಯನ್ನು ಕಳೆದುಕೊಂಡು ಉಡುಗಿ ಹೋಗುವಂತಹ ವಿಶಿಷ್ಟವಾದ ಆ ಕ್ಷಣದ್ದೇ ಆದರೂ ಆಯಾ ವ್ಯಕ್ತಿಗಳ ಶೀಲವನ್ನು ಅಭಿವ್ಯಕ್ತಿಸುವ ಮಾಧ್ಯಮವಾಗಿ ಇರುವ ಮಾತುಗಳ ಬಗ್ಗೆ ನಾನು ಹೇಳುತ್ತಿದ್ದೇನೆ… ಕತೆಗಾತಿಯಾದ ವೈದೇಹಿಯವರ ಶಕ್ತಿಯಿರುವುದು ಈ ಮಾತಿನ ಪ್ರಪಂಚವನ್ನು, ವಾಸ್ತವ ಪ್ರಪಂಚದಷ್ಟೇ ಮೂರ್ತವಾದ, ಸಾಂದ್ರವಾದ, ನಿಬಿಡವಾದ ಮಾತಿನ ಪ್ರಪಂಚವನ್ನು ನಿರ್ಮಿಸುವುದರಲ್ಲಿ. ಅವರ ಕತೆಗಳಲ್ಲಿ ಆಗುವುದು ನಡೆಯುವುದು ಇವುಗಳ ಅಂಶ ಕಡಿಮೆಯೇ. ಆದರೆ ಮಾತುಗಳ ಮೂಲಕ ‘ಘಟಿಸುವುದು’ ಮಾತ್ರ ಅಚ್ಚರಿ ಹುಟ್ಟಿಸುವಷ್ಟು ವೈವಿಧ್ಯಪೂಣವಾಗಿದೆ, ಸಂಕೀರ್ಣವಾಗಿದೆ.
– ರಾಜೇಂದ್ರ ಚೆನ್ನಿ
(ವೈದೇಹಿ ಗೌರವ ಗ್ರಂಥ ‘ಇರುವಂತಿಗೆ’ಯಲ್ಲಿ ಬರೆದ ಲೇಖನದಿಂದ ಉಧೃತ)

Reviews

There are no reviews yet.

Be the first to review “ಸಲ್ಮಾ ಮತ್ತು ಸುರಭಿ”

Your email address will not be published. Required fields are marked *

No Author Found